ಒಟ್ಟು 10 ಕಡೆಗಳಲ್ಲಿ , 1 ಕವಿಗಳು , 10 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿಸ್ವರಪದಮಂತದೊ ಳಾದೆಡೆಯೊಳ್ ದೀರ್ಘಮಕ್ಕುಮೆರಡನೆಯ ವಿಭ ಕ್ತ್ಯಾದಾನಪದಂ ದೀರ್ಘಂ ಪಾದಂತದೊಳುೞಿದ ತಾಣದೊಳ್ ಸ್ವಚ್ಛಂದಂ
--------------
ಶ್ರೀವಿಜಯ
ಇಂತು ವಿಶೇಷ್ಯಂ ಕ್ರಿಯೆಯಂ ಸಂತಂ ನೋೞ್ಪುದಱೆುನಕ್ಕುಮದು ಸಾಪೇಕ್ಷಂ ಚಿಂತಿಸೆ ಸಮಾಸಮಂ ಪೇ ೞ್ಪಂತಪ್ಪ ಪದಂ ಸಮರ್ಥಮಲ್ತಪ್ಪುದಱೆಂ
--------------
ಶ್ರೀವಿಜಯ
ಕಾವೇರಿಯಿಂದಮಾ ಗೋ ದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸು ಧಾವಳಯವಿಲೀನವಿಶದ ವಿಷಯ ವಿಶೇಷಂ
--------------
ಶ್ರೀವಿಜಯ
ತಿಳಿಪಲಡಿಗೆಱಗಿದೋಪನ ತಳಂಗಳಾ ತೀಟದಿಂ ಪದಂಗಳೊಳೊಗೆದಾ ಪುಳಕಚಯಂಗಳ್ ಕಳೆದುವು ಮುಳಿಸಂ ನಲ್ಲಳ್ಗೆ ಬೆಳ್ಮೊಗಂಗೆಯ್ದಿರೆಯುಂ
--------------
ಶ್ರೀವಿಜಯ
ನಿಕ್ಕುವಮಿಂತುಮಲ್ಲದದ (ಱಾ)ಕ್ರಿಯೆ ಸಾರ್ದಿರೆ ಪತ್ತಿ ಮುಂದೆ ಸ ಯ್ತಕ್ಕುಮನುಕ್ರಮಾನುಗತದಿಂ ಬರಮೀಗೆಮಗೆಂಬ ಕಾರಕಂ ಸಕ್ಕದವೇನೊ ಕಾರಕ ವಿಭಕ್ತಿಯೊಳೊಂದೆ ಸಮಾಸಯುಕ್ತಿ ಲೇ ಸಕ್ಕುಮಭೇದರೂಪಗುಣಮಾಗಿ ತಗುಳ್ದಿರೆ ಮೇಣ್ ಕ್ರಿಯಾಪದಂ
--------------
ಶ್ರೀವಿಜಯ
ನುಡಿಗಳೊಡಂಬಡಲ್ ಬಗೆದವೋಲ್ ಬಗೆಯಂ ಮಿಗಲೀಯದೊಂದೆ ನಾ ೞ್ನುಡಿಯ ಬೆಡಂಗೆ ಕನ್ನಡದ ಮಾತಿನೊಳಾ ವಿಕಟಾಕ್ಷರಂಗಳೊಳ್ ತೊಡರದೆ ಸಕ್ಕದಂಗಳ ಪದಂ ಪವಣಾಗಿರೆ ಮೆಲ್ಪುವೆತ್ತು ದಾಂ ಗುಡಿವಿಡುವಂತೆ ನೀಳ್ದು ನಿಲೆ ಪೇೞ್ವುದು ನೀತಿನಿರಂತರಕ್ರಮಂ
--------------
ಶ್ರೀವಿಜಯ
ಮೊದಲ ಪದಂ ನ್ಯೂನಾಕ್ಷರ ಮದಱಿಂದೆ ಬೞಿಕ್ಕಮರ್ಧಮಧಿಕಾಕ್ಷರಮಿಂ ತಿದಱಿಂ ಛಂದೋಭಂಗಂ ಪದನಱಿದದನಿಂತು ಸಮಱಿ ಪೇೞ್ದೊಡೆ ಚೆಲ್ವಂ
--------------
ಶ್ರೀವಿಜಯ
ಯತಿಯೆಂಬುದುಸಿರ್ವ ತಾಣಂ ಕೃತಾಸ್ಪದಂ ವೃತ್ತಾಜಾತಿ ಪದ ಪದ್ಧತಿಯೊಳ್ ಸತತಂ ಛಂದೋವಿದಿತ ಪ್ರತೀತಶಾಸ್ತ್ರೋಕ್ತಮಾರ್ಗದಿಂದಱಿ ವುದದಂ
--------------
ಶ್ರೀವಿಜಯ
ವಿದಿತಸಮಸಂಸ್ಕೃತೋದಿತ ಪದಂಗಳೊಳ್ ಪುದಿದು ಬೆರಸಿ ಬರೆ ಕನ್ನಡದೊಳ್ ಮುದಮನವು ತರ್ಕುಮತಿಶಯ ಮೃದಂಗ ಸಂಗೀತಕಾದಿ ಮಧುರರವಂಬೋಲ್
--------------
ಶ್ರೀವಿಜಯ
ಸಮಱುಸಮಾಸ ಪದಂಗಳ ನಮರ್ದಿರೆ ಸಯ್ತಾಗಿ ಬಗೆದು ಪೇೞ್ದೊಡದಕ್ಕುಂ ಕ್ರಮದೋಜೋಲಕ್ಷಣಮು ತ್ತಮಮಿದು ಗದ್ಯಕ್ಕಲಂಕ್ರಿಯಾನುಸಮೇತಂ
--------------
ಶ್ರೀವಿಜಯ