ಒಟ್ಟು 4 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕುದುರೆ ತಗುಳ್ದುವಾದೆಸೆಯ ಬಿಲ್ಲವರಂ ಸುೞಿದಾನೆ ನಿಂದು ಮೆ ಟ್ಟಿದುವೆಲೆ ನೋಡಿಮೆಂಬುದಿದು ಜಾತಿಕೃತೈಕಬಹುತ್ವಮೊಂದುಗುಂ ಕುದಿಕುದಿದತ್ತಣಿಂ ಕುದುರೆ ನೂಱಱೊಳಾ ಬಲದಾನೆ ಪತ್ತು ತಾ ಗಿದುವೆನೆ ದೋಷಮಾ ಪಿರಿದು ಸಂಖ್ಯೆಯೋಳೇಕಬಹುತ್ವ ಸಂಗದಿಂ
ಜಾತಿವಿಭಾಗಮಂ ಬಗೆದು ಪೇೞಿ ಬಹುತ್ವಮನೇಕ ವಾಕ್ಯ ಸಂ ಜಾತಗುಣಂ ತದೇಕವಚನಂಗಳೊಳಂ ದೊರೆವೆತ್ತು ಕೂಡುಗುಂ ಮಾತಿನೊಳೇನೋ ಸಂಖ್ಯೆಗಳೊಳೇಕ ಬಹುತ್ವ ವಿಪರ್ಯಯಕ್ಕಸಂ ಖ್ಯಾತಗುಣಂ ವಿಕಲ್ಪಮದು ಕನ್ನಡದೊಳ್ ಗುಣಮಂ ತಗುಳ್ಚುಗುಂ