ಒಟ್ಟು 6 ಕಡೆಗಳಲ್ಲಿ , 1 ಕವಿಗಳು , 5 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮರಾಧಿರಾಜ ಹುತವಹ ಯಮ ನೈಋತ ವರುಣ ವಾಯು ಯಕ್ಷೇಶಾನ ಕ್ರಮದಿನವರೆಣ್ಬರಂತು ತ್ತಮನಯ್ ನೀಂ ನವಮಲೋಕಪಾಳನೆ ಅವರೊಳ್
--------------
ಶ್ರೀವಿಜಯ
ಒಳಗಿರ್ದ ವೈರಿಗಳ್ ಮೊ ಕ್ಕಳಮೀಯರ್ ಪೆರ್ಚಲಧಿಕವಿಭವರ್ಕಳುಮಂ ತಳರದೊಡನಿರ್ದು ಬಡಬಾ ನಳನೆಂದುಂ ಪೆರ್ಚಲೀಯದಂತಂಬುಧಿಯಂ
--------------
ಶ್ರೀವಿಜಯ
ನೆನೆನೆನೆದು ಪೆಱರ ಮಾತುಗ ಳನೆ ನೆಗೞ್ದಿರೆ ಕೃತಿಯೊಳಿಡುವವಂ ನಗದ ಗುಹಾ ಧ್ವನಿಯವೊಲನರ್ಥವಚನಂ ತನಗಾಗಿಸಲಱೆ ಯನುಚಿತ ವಾಕ್ಚತುರತೆಯಂ
--------------
ಶ್ರೀವಿಜಯ
ಮಲಯಾನಿಳನೆಸಕದಿನುದಿ ರ್ವಲರ್ಗಳ ಮಕರಂದಮಾಲೆಗಳ್ ಪರೆದತ್ತಂ ನೆಲದೊಲ್ ಬಿೞ್ದುಂ ಪಡೆದುವು ವಿಲೋಚನಾಂಬುಗಳನಗ್ಗಳಂ ವಿರಹಿಗಳಾ
--------------
ಶ್ರೀವಿಜಯ
ವಿಳಸಿತ ಸಸ್ಯಸಂಪದಭಿರಾಮಗುಣೋದಯೆ ತಾಳ್ದಿದಳ್ ಧರಾ ಲಳನೆ ವಿಶಾಲಲಕ್ಷ್ಮಿಯನನಾರತಮೆಂಬುದು ದಕ್ಷಿನಾಪಥಂ ಜಳನಿಧಿಮೇಖಲಾವಲಯಿತಾಂಗಿ ಕರಂ ಸೊಗಯಿಪ್ಪುದಾಯ್ತು ಭೂ ಲಳನೆ ವಿಶಾಲಲಕ್ಷ್ಮಿಯನನಾಕುಳಮೆಂಬುದಿದುತ್ತರಾಪಥಂ (ಗೀತಿಕೆ)
--------------
ಶ್ರೀವಿಜಯ